Connect with us

    LATEST NEWS

    ಪೈಲೆಟ್ ತರಬೇತಿ ಪಡೆದಿದ್ದ ಯುವಕ ಆತ್ಮಹತ್ಯೆ

    ಮಂಗಳೂರು, ಜುಲೈ 02 : ಪೈಲೆಟ್ ತರಬೇತಿ ಪಡೆದಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.


    ಮೃತ ಯುವಕ ಅದ್ವೈತ ಶೆಟ್ಟಿ (32) ಎಂದು ಗುರುತಿಸಲಾಗಿದ್ದು, ನಗರದ ಮರೋಳಿ ನಿವಾಸಿಯಾಗಿದ್ದು ಪೈಲೆಟ್‌ ತರಬೇತಿ ಮುಗಿಸಿ ಕೆಲಸ ಹುಡುಕುತ್ತಿದ್ದರು. ಮೂರು ದಿನಗಳ ಹಿಂದೆ ಊರಿಗೆ ಮರಳಿದ್ದು ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply