Connect with us

BANTWAL

ಚಿಂತಾಜನಕ ಸ್ಥಿತಿಯಲ್ಲಿರುವ ತಾಯಿ ನೆನೆದು ಆತ್ಮಹತ್ಯೆಗೆ ಶರಣಾದ ಮಗ

ಬಂಟ್ವಾಳ ಫೆಬ್ರವರಿ 9: ಖಾಸಗಿ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿರುವ ತಾಯಿಯನ್ನು ಉಳಿಸಿಕೊಳ್ಳಲು ಸಾದ್ಯವಿಲ್ಲ ಎಂದು ಮನನೊಂದ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಮೃತ ಯುವಕನನ್ನು ಅನಂತಾಡಿ ಪಂತಡ್ಕ ನಿವಾಸಿ ನೀರಜ್(30) ಎಂದು ಗುರುತಿಸಲಾಗಿದ್ದು, ಅನಾರೋಗ್ಯದಲ್ಲಿ ತಾಯಿಯನ್ನು ಉಳಿಸಲು ಸಾಧ್ಯವಾಗಿಲ್ಲ, ತಾಯಿಗಿಂತ ಮೊದಲು ತಾನೇ ಹೋಗುತ್ತೇನೆ ಎಂದು ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.


ಪಾಣೆಮಂಗಳೂರು ಸೇತುವೆಯಿಂದ ಯುವಕ ರಾತ್ರಿ ನದಿಗೆ ಹಾರಿದ್ದು, ಮಂಗಳವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಸೋಮವಾರ ರಾತ್ರಿ ಹುಡುಕಾಡಿದರೂ, ಯುವಕನ ಸುಳಿವು ಪತ್ತೆಯಾಗಿರಲಿಲ್ಲ. ಸ್ಥಳೀಯ ಈಜುಗಾರ ಮೊಹಮ್ಮದ್ ನಂದಾವರ ಹಾಗೂ ತಂಡ, ಬಂಟ್ವಾಳ ಅಗ್ನಿಶಾಮಕ ದಳದ ತಂಡ ಹುಡುಕಾಟ ನಡೆಸಿದೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.