LATEST NEWS
ಕುಂದಾಪುರ – ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ನಾನು ಸತ್ತು ಹೋಗಿದ್ದೇನೆ ಎಂದು ಹೇಳಿ !

ಕುಂದಾಪುರ ಡಿಸೆಂಬರ್ 30: – ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ನಾನು ಸತ್ತು ಹೋಗಿದ್ದೇನೆ ಎಂದು ಹೇಳಿ ! ಎಂದು ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತ ಯುವಕನನ್ನು ಕುಂದಾಪುರದ ಹೆಮ್ಮಾಡಿಯ ವಿಘ್ನೇಶ್ ಎಂದು ಗುರುತಿಸಲಾಗಿದ್ದು, ಎಂಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿಘ್ನೇಶ್ ಸ್ನೇಹಿತರೊಂದಿಗೆ ಬಿಸಿನೆಸ್ ಆರಂಭಿಸಲು ಮೊಬೈಲ್ ಆಪ್ ಮೂಲಕ ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡಲಾಗದೇ ಮನೆಯ ಮುಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡೆತ್ ನೋಟ್ ನಲ್ಲಿ ತಾನು ಸಾಲ ಮಾಡಿಕೊಂಡಿದ್ದಾಗಿ ಬರೆದಿರುವ ವಿಘ್ನೇಷ್ ಲೋನ್ ಬಾಕಿ ಇದೆ ಎಂದು ಕರೆ ಬಂದರೆ ನಾನು ಸತ್ತು ಹೋಗಿದ್ದೆನೆ ಎಂದು ತಿಳಿಸಿ ಎಂದು ಬರೆದಿದ್ದಾನೆ. ಅಲ್ಲದೆ ಈ ತಿಂಗಳ ಸಂಬಳ ಬ್ಯಾಂಕ್ ಅಕೌಂಟ್ ಗೆ ಬರುತ್ತದೆ ಎಟಿಎಂ ಪಾಸ್ವರ್ಡ್ ಅನ್ನು ಡೆತ್ ನೋಟಿನಲ್ಲಿ ಬರೆದಿದ್ದಾನೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು