Connect with us

LATEST NEWS

ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಮಂಗಳೂರು ಮೇ 24 : ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಸ್ಥಳೀಯರು ಯುವಕನ ರಕ್ಷಣೆ ಮಾಡಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಮೃತ ಯುವಕನನ್ನು ಕಲ್ಲಡ್ಕದ ನಿಶಾಂತ್ ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ನಿಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದು ಆತನನ್ನು ನೋಡಿದ ಕೂಡಲೇ ಈದ್ ಹಬ್ಬದ ಸಂಭ್ರಮದಲ್ಲಿದ್ದರೂ ಗೂಡಿನಂಗಡಿಯ ಶಮೀರ್ ಮುಹಮದ್, ತೌಸೀಫ್ ಝಾಹಿದ್,ಮುಕ್ತಾರ್ ಆರೀಫ್ ರಕ್ಷಣೆ ಮಾಡಿದ್ದಾರೆ. ಆದರೆ ನಿಶಾಂತ್ ನನ್ನು ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ.

Facebook Comments

comments