LATEST NEWS
ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ – ಅನ್ಯಕೋಮಿನ ಯುವಕನ ಮೇಲೆ ಹಲ್ಲೆ
ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ – ಅನ್ಯಕೋಮಿನ ಯುವಕನ ಮೇಲೆ ಹಲ್ಲೆ
ಮಂಗಳೂರು ಡಿಸೆಂಬರ್ 13: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಯುವತಿಯೊಂದಿಗೆ ಇದ್ದ ಅನ್ಯಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ.
ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ.
ಇಂದು ಮದ್ಯಾಹ್ನ ಸ್ಟೇಟ್ ಬ್ಯಂಕ್ ಬಸ್ ನಿಲ್ದಾಣದ ಬಳಿ ಯುವತಿಯೊಂದಿಗೆ ಅನ್ಯ ಕೋಮಿನ ಯುವಕನೊಬ್ಬ ಸಲುಗೆಯಿಂದ ವರ್ತಿಸುತ್ತಿದ್ದ ಎಂದು ಹೇಳಲಾಗಿದೆ.
ಇದನ್ನು ಗಮನಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಏಕಾಏಕಿ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಯುವಕನಿಗೆ ಹಲ್ಲೆಯಾಗುತ್ತಿದ್ದಂತೆ ಯುವತಿ ಸ್ಥಳದಿಂದ ಪರಾರಿಯಾಗಿದ್ದಾಳೆ.
ಯುವಕನನ್ನು ವಶಕ್ಕೆ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಯುವಕನಿಗೆ ಎಚ್ಚರಿಕೆ ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವಕ ಹಾಗು ಯುವತಿ ನಗರದ ಪ್ರತಿಷ್ಠಿತ ಮಾಲ್ ಒಂದರಲ್ಲಿ ಉದ್ಯೋಗದಲ್ಲಿದ್ದು ಪರಿಚಿತರು ಎಂದು ಹೇಳಲಾಗಿದೆ.
You must be logged in to post a comment Login