ಪುತ್ತೂರು ಭಾರಿ ಮಳೆಗೆ ಕಾಲುಸಂಕದಿಂದ ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಯುವಕ

ಪುತ್ತೂರು ಅಗಸ್ಟ್ 10: ಭಾರಿ ಮಳೆಗೆ ವ್ಯಕ್ತಿಯೊಬ್ಬ ಕೊಚ್ಚಿಹೋದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಜಿಡೆಕಲ್ಲು ಎಂಬಲ್ಲಿ ಈ ಘಟನೆ ನಡೆದಿದ್ದು, ಮಳೆ ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿಯನ್ನು ಜನಾರ್ಧನ (30) ಎಂದು ಗುರುತಿಸಲಾಗಿದೆ.

ಜನಾರ್ಧನ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಪುತ್ತೂರಿನ ಜಿಡೆಕಲ್ಲು ಎಂಬಲ್ಲಿ ಕಾಲು ಸಂಕದಿಂದ ಆಕಸ್ಮಿಕವಾಗಿ ಜಾರಿಗೆ ನೀರಿಗೆ ಬಿದ್ದಿದ್ದಾರೆ. ಭಾರಿ ಮಳೆ ಹಿನ್ನಲೆಯಲ್ಲಿ ಸಂಕದಲ್ಲಿ ಬಾರಿ ಪ್ರಮಾಣದ ನೀರು ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Facebook Comments

comments