Connect with us

DAKSHINA KANNADA

ನಳಿನ್ ಕುಮಾರ್ ಸೇರಿದಂತೆ ಬಿಜೆಪಿ ಮುಖಂಡರಿಗೆ ಧಿಕ್ಕಾರ ಕೂಗಿದ ಹಿಂದೂ ಕಾರ್ಯಕರ್ತರು….!!

ಪುತ್ತೂರು ಜುಲೈ 27: ನಿನ್ನೆ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ ಅವರ ಅಂತಿಮ ದರ್ಶನದ ಮೇಳೆ ಕಾರ್ಯಕರ್ತರು ಬಿಜೆಪಿ ಮುಖಂಡರ ವಿರುದ್ದ ಆಕ್ರೋಶ ಹೊರಹಾಕಿದ್ದು, ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸದ್ಯ ಬೆಳ್ಳಾರೆ ಪರಿಸರದಲ್ಲಿ ಸ್ಥಿತಿ ಬಿಗುವಿನಿಂದ ಕೂಡಿದೆ.


ಪ್ರವೀಣ್ ನೆಟ್ಟಾರು ಅವರ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ನಳಿನ್ ಕುಮಾರ್ ಅವರಿಗೆ ಧಿಕ್ಕಾರ ಕೂಗಿದರು. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಪಕ್ಷದ ಕಾರ್ಯಕರ್ತನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಏಕೆ ಎಂದು ಪ್ರಶ್ನಿಸಿದರು.

ಪಕ್ಷದ ಅಮಾಯಕ ಕಾರ್ಯಕರ್ತನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಬರ್ಬರವಾಗಿ ಕೊಲೆಗೀಡಾಗಿರುವ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರ ಅಂತಿಮ‌ ದರ್ಶನಕ್ಕಾಗಿ ಬೆಳ್ಳಾರೆಗೆ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಒಟ್ಟಿಗೆ ಬಂದರು. ಅವರು ಕಾರಿನಿಂದ ಇಳಿಯುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ನಳಿನ್‌ ಕುಮಾರ್ ಕಟೀಲ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದರು.


ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್, ಸಚಿವರಾದ ಸುನೀಲ್‌ಕುಮಾರ್, ಅಂಗಾರ, ಹರೀಶ್ ಪೂಂಜಾ ಅವರನ್ನು ಸುತ್ತುವರೆದು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ನಳಿನ್‌ ಕುಮಾರ್ ಅವರ ಕಾರನ್ನು ಕಾರ್ಯಕರ್ತರು ಮೇಲಕ್ಕೆ ಎತ್ತಲು ಪ್ರಯತ್ನಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply