ಬಂಟ್ವಾಳ, ಮಾರ್ಚ್ 15: ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19 ರಂದು ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ ಡೆನ್ನನ 2026’ ಕಾರ್ಯಕ್ರಮದ ಲೋಗೋ ಅನಾವರಣ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ಭಾನುವಾರ ನಡೆಯಿತು.

ಕಾರ್ಯಕ್ರಮದಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಹಾಗೂ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಲೋಗೋವನ್ನು ಅನಾವರಣಗೊಳಿಸಿದರು. ಇದೇ ವೇಳೆ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಡೆನ್ನನ ಪ್ರಧಾನ ಸಂಚಾಲಕರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಜೊತೆ ಕಾರ್ಯದರ್ಶಿ ಆನಂದ ಶಂಬೂರು, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಪ್ರಥಮ ಉಪಾಧ್ಯಕ್ಷೆ ವಿದ್ಯಾ ರಾಕೇಶ್, ದ್ವಿತೀಯ ಉಪಾಧ್ಯಕ್ಷ ಸುರೇಶ್ ಪೂಜಾರಿ, ಕೋಶಾಧಿಕಾರಿ ಸತೀಶ್ ಕಿಲ್ಪಾಡಿ, ಜೊತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ, ಸಮಾವೇಶ ನಿರ್ದೇಶಕ ಅಜಿತ್ ಪಾಲೇರಿ, ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಸಂಘಟನಾ ಕಾರ್ಯದರ್ಶಿ ನಾಗೇಶ್ ಪೂಜಾರಿ ಉಪಸ್ಥಿತರಿದ್ದರು.
ಇದಲ್ಲದೆ ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಮಧುಸೂದನ್ ಮದ್ವ, ಕೋಶಾಧಿಕಾರಿ ನವೀನ್ ಪೂಜಾರಿ ಲೊರೆಟ್ಟೋ, ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಡೆನ್ನಾನ ಸಂಚಾಲಕರು ಉದಯ ಪೂಜಾರಿ ಮೇನಾಡು, ಸತೀಶ್ ಪೂಜಾರಿ ಬಾಯಿಲ, ಸಲಹೆಗಾರ ರಾಮಚಂದ್ರ ಸುವರ್ಣ ತುಂಬೆ, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.