KARNATAKA
ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಝಿಕಾ ವೈರಸ್, 7 ಪ್ರಕರಣ ದಾಖಲು, ಆರೋಗ್ಯ ಇಲಾಖೆ ಹೈ ಅಲರ್ಟ್..!

ಬೆಂಗಳೂರು : ಕರ್ನಾಟಕಕ್ಕೆ ಝಿಕಾ ವೈರಸ್ ಎಂಟ್ರಿ ಕೊಟ್ಟಿದ್ದು ಆತಂಕ ಹೆಚ್ಚಾಗಿದೆ. ರಾಜ್ಯದಲ್ಲಿ ಈಗಾಗಲೇ 7 ಝೀಕಾ ವೈರಸ್ (Zika virus) ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.
ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗುಳ್ಳೆ, ದದ್ದುಗಳು ಕಾಣಿಸಿಕೊಳ್ಳೋದು ಝಿಕಾ ವೈರಸ್ ಗುಣ ಲಕ್ಷಣಗಳಾಗಿದ್ದು. ಇನ್ನು ಬಹುತೇಕ ಝೀಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ.ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ, ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಝಿಕಾ ವೈರಸ್ ದೃಢಪಟ್ಟರೆ, ಕುಟುಂಬದ ಸದಸ್ಯರ ರಕ್ತದ ಮಾದರಿ ಲ್ಯಾಬ್ ಟೆಸ್ಟ್ಗೆ ಒಳಪಡಿಸಬೇಕು.ಮನೆಯ ಸುತ್ತಮುತ್ತಲಿನ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುವುದು ಕಡ್ಡಾಯ. ಆ ಪ್ರದೇಶದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಕಂಟೈನ್ವೆಂಟ್ ಜೋನ್ ಎಂದು ಪರಿಗಣಿಸಲಾಗುವುದು. ಝಿಕಾ ವೈರಸ್ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಕಂಟೇನ್ಮೆಂಲಟ್ ವಲಯದಲ್ಲಿರುವ ಗರ್ಭಿಣಿಯರು ಸೀರಂ ಮತ್ತು ಮೂತ್ರದ ಮಾದರಿಯನ್ನು ಝೀಕಾ ವೈರಸ್ ಪರೀಕ್ಷೆಗೆ ಸಲ್ಲಿಸಬೇಕು. ಸ್ಕ್ಯಾನಿಂಗ್ ವರದಿಯನ್ನು ತಜ್ಞರಿಂದ ವಿಶ್ಲೇಷಿಸಬೇಕು. ದೇಹವನ್ನು ಸಂಪೂರ್ಣವಾಗಿ ಮುಚ್ಚುವಂತೆ ಬಟ್ಟೆಯನ್ನು ಧರಿಸುವುದು, ಸೊಳ್ಳೆ ವರದೆಯ ಬಳಕೆಯೂ ಸೇರಿದಂತೆ ಇತರ ಸ್ವಯಂ ರಕ್ಷಣಾ ವಿಧಾನಗಳನ್ನು ಸಾರ್ವಜನಿಕರು ಪಾಲಿಸುವುದು ಅಗತ್ಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.
