ಕೋಟ ಡಬ್ಬಲ್ ಮರ್ಡರ್ ಪ್ರಕರಣ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಬಂಧನ

ಉಡುಪಿ ಫೆಬ್ರವರಿ 8: ಉಡುಪಿ ಜಿಲ್ಲೆಯ ತಲ್ಲಣಗೊಳಿಸಿದ್ದ ಕೋಟ ಡಬ್ಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯನನ್ನು ಬಂಧಿಸಲಾಗಿದ್ದು, ಈತನೇ ಪ್ರಕರಣದ ಪ್ರಮುಖ ಸೂತ್ರಧಾರಿ ಎಂದು ಹೇಳಲಾಗಿದೆ.

ಜನವರಿ 27 ರಂದು ಗಲಾಟೆಯ ರಾಜಿಗೆ ಹೋಗಿದ್ದಾಗ ಆರೋಪಿಗಳು ಭರತ್ ಮತ್ತು ಯತೀಶ್ ನನ್ನು ಕೊಲೆ ಮಾಡಿದ್ದರು. ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಕೊಲೆಯ ಪ್ರಮುಖ ಸೂತ್ರಧಾರಿ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್‍ ನ್ನು ಬಂಧಿಸಿದ್ದಾರೆ. ರಾಘವೇಂದ್ರ ಕಾಂಚನ್ ಗೂ ಭರತ್‍ಗೂ ವೈಷಮ್ಯವಿತ್ತು. ಇದರಿಂದ ಭರತ್ ಬೆಳವಣಿಗೆಯನ್ನು ರಾಘವೇಂದ್ರ ಕಾಂಚನ್ ಸಹಿಸಿರಲಿಲ್ಲ. ಹೀಗಾಗಿ ಸಂಚು ನಡೆಸಿ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ಹಿಂದೆ ರೌಡಿಶೀಟರ್ ಹರೀಶ್ ರೆಡ್ಡಿ, ರವೀಂದ್ರ ಪೂಜಾರಿ, ಮಹೇಶ್ ಗಾಣಿಗ ಈ ಮೂವರು ಆರೋಪಿಗಳನ್ನು ಶಿವಮೊಗ್ಗದ ಹೊಸನಗರದಿಂದ ಪೊಲೀಸರು ವಶಕ್ಕೆ ಪಡೆದಿದ್ದರು. ಇನ್ನು ರಾಜಶೇಖರ ರೆಡ್ಡಿ ಹಾಗೂ ರವಿಯನ್ನು ಕೊಡಗಿನಲ್ಲಿ ಬಂಧಿಸಲಾಗಿತ್ತು.
ಬಂಧಿತರಲ್ಲಿ ಮೂವರು ರೌಡಿಶೀಟರ್ ಗಳಾಗಿದ್ದಾರೆ. ಪ್ರಕರಣ ಸಂಬಂಧ ಇನ್ನಷ್ಟು ಆರೋಪಿಗಳ ಬಂಧನವಾಗುವ ಸಾಧ್ಯತೆಗಳಿವೆ.

Facebook Comments

comments