Connect with us

    LATEST NEWS

    ಜಿಂಬಾಬ್ವೆ ಮಾಜಿ ಕ್ರಿಕೆಟರ್ ಹೀತ್ ಸ್ಟ್ರೀಕ್ ನಿಧನ

    ಜಿಂಬಾಬ್ವೆ ಅಗಸ್ಟ್ 23: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಜಿಂಬಾಬ್ವೆ ಕ್ರಿಕೆಟರ್ ಹೀತ್ ಸ್ಟ್ರೀಕ್ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಕರುಳು ಹಾಗೂ ಯಕೃತ್ತಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸ್ಟ್ರೀಕ್ ದಕ್ಷಿಣ ಆಫ್ರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.


    ಜಿಂಬಾಬ್ವೆಯ ಶ್ರೇಷ್ಠ ಕ್ರಿಕೆಟ್‌ ಆಟಗಾರರಲ್ಲಿ ಒಬ್ಬರಾದ ಸ್ಟ್ರೀಕ್‌ 2000 ಮತ್ತು 2004ರ ವಿಶ್ವಕಪ್‌ ಟೂರ್ನಿ ವೇಳೆ ತಂಡವನ್ನ ಮುನ್ನಡೆಸಿದ್ದರು. 65 ಟೆಸ್ಟ್ ಪಂದ್ಯಗಳು ಮತ್ತು 189 ಏಕದಿನ ಪಂದ್ಯಗಳನ್ನಾಡಿರುವ ಸ್ಟ್ರೀಕ್‌, ಟೆಸ್ಟ್‌ ಕ್ರಿಕೆಟ್‌ನಲ್ಲಿ 100 ವಿಕೆಟ್‌ ಪಡೆದ ಏಕೈಕ ಜಿಂಬಾಬ್ವೆ ಆಟಗಾರ ಎನಿಸಿಕೊಂಡಿದ್ದರು. ಜಿಂಬಾಬ್ವೆ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುತ್ತಿದ್ದ ಹೀತ್‌ ಸ್ಟ್ರೀಕ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ 1,990 ರನ್‌, ಏಕದಿನ ಕ್ರಿಕೆಟ್‌ನಲ್ಲಿ 2,943 ರನ್‌ ಗಳಿಸಿದ್ದಾರೆ. ಹರಾರೆಯಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ನಡೆದ ಪಂದ್ಯದಲ್ಲಿ 127 ರನ್‌ ಗಳಿಸಿದ್ದು ಏಕೈಕ ಟೆಸ್ಟ್‌ ಶತಕವಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply