BANTWAL
ಅ.22 ರಂದು ಸಿ ಎಂ ಬಂಟ್ವಾಳಕ್ಕೆ. 300 ಕೋ. ವಿವಿಧ ಯೋಜನೆಗಳ ಉದ್ಘಾಟನೆ
ಅ.22 ರಂದು ಸಿ ಎಂ ಬಂಟ್ವಾಳಕ್ಕೆ. 300 ಕೋ. ವಿವಿಧ ಯೋಜನೆಗಳ ಉಧ್ಘಾಟನೆ
ಮಂಗಳೂರು, ಅಕ್ಟೋಬರ್ 14 : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಕ್ಟೋಬರ್ 22 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಗ್ಗೆ ಆಗಮಿಸುವ ಮುಖ್ಯಮಂತ್ರಿಗಳು ಆ ಇಡೀ ದಿನ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಅವರ ಸ್ವಕ್ಷೇತ್ರವಾದ ಬಂಟ್ವಾಳದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಆ ದಿನ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸುಮಾರು 300 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ದಿ ಯೋಜನೆಗಳ ಉದ್ಟಾಟನೆ ಮತ್ತು ಶಿಲನ್ಯಾಸ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಈಗಾಗಲೇ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ನೂತನ ಮಿನಿ ವಿಧಾನ ಸೌಧ ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಜ್ಜುಗೊಂಡಿದೆ. ಮೆಸ್ಕಂ ಕಚೇರಿಯ ಕಾಮಾಗಾರಿಗಳು ಪೂರ್ಣಗೊಂಡಿದೆ.
ಬಂಟ್ವಾಳ ಕ್ಷೇತ್ರದ ಜನರ ಬಹುದಿನಗಳ ಬೇಡಿಕೆಯಾದ ಅತ್ಯಾಧುನಿಕ, ಸುಸಜ್ಜಿತ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣ ಕಾಮಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗಾಗಿ ಮುಖ್ಯಮಂತ್ರಿಗಳನ್ನು ಕಾದು ಕುಳಿತಿದೆ.
ಆ ದಿನದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯೊಂದಿಗೆ ಇಂಧನ ಸಚಿವರಾದ ಡಿ .ಕೆ. ಶಿವಕುಮಾರ್, ಸಾರಿಗೆ ಸಚಿವ ಹೆಚ್. ಎಂ ರೇವಣ್ಣ , ಆಹಾರ ಸಚಿವರಾದ ಯು.ಟಿ. ಖಾದರ್, ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.