LATEST NEWS
ಅಕ್ರಮ ಮರಳುಗಾರಿಕೆ ಅಡ್ಡಕ್ಕೆ ಪೊಲೀಸ್ ದಾಳಿ 1 ಕೋಟಿ ರೂಪಾಯಿ ಮೌಲ್ಯದ ವಸ್ತು ವಶ
ಅಕ್ರಮ ಮರಳುಗಾರಿಕೆ ಅಡ್ಡಕ್ಕೆ ಪೊಲೀಸ್ ದಾಳಿ 1 ಕೋಟಿ ರೂಪಾಯಿ ಮೌಲ್ಯದ ವಸ್ತು ವಶ
ಮಂಗಳೂರು ನವೆಂಬರ್ 8: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕಾ ಅಡ್ಡಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ.
ಸಹ್ಯಾದ್ರಿ ಕಾಲೇಜಿನ ಹಿಂಬಾಗದ ನೇತ್ರಾವತಿ ನದಿಯಿಂದ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ. ನದಿಯಿಂದ ಅಕ್ರಮವಾಗಿ ಯಂತ್ರೋಪಕರಣಗಳನ್ನು ಬಳಸಿ ಮರಳನ್ನು ತೆಗೆದು ವಾಹನಗಳಿಗೆ ತುಂಬಿಸಿ ಅಕ್ರಮವಾಗಿ ಹೊರ ರಾಜ್ಯಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎಂದು ಪೊಲೀಸರ ಪ್ರಕಟಣೆ ತಿಳಿಸಿದೆ. ಮಂಗಳೂರು ಗ್ರಾಮಾಂತರ ಠಾಣಾ ಪೊಲಿಸ್ ಅಧಿಕಾರಿಗಳು ಮತ್ತು ಕಂಕನಾಡಿ ನಗರ ಠಾಣಾ ಪೊಲೀಸ್ ಅಧಿಕಾರಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದರು.
ವಾಹನಗಳಲ್ಲಿ ಮರಳನ್ನು ತುಂಬಿಸಿ ಅಲ್ಲಿಂದ ಸಮೀಪದ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿ ಅಲ್ಲಿಂದ ವಾಹನಗಳ ಮಾಲಿಕರುಗಳ ಹಾಗೂ ಅಕ್ರಮ ಮರಳು ಶೇಖರಣೆಗೆ ಅವಕಾಶ ನೀಡಿದ್ದ ಭೂ ಮಾಲಿಕರ ವಿರುದ್ದ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಅಬ್ದುಲ್ ಲತೀಪ್ ಮತ್ತು ಜಾಗದ ಮಾಲಿಕರಾದ ಡೆಲ್ವಿ ಆಸ್ಟಿನ್ ಫೆರ್ನಾಂಡಿಸ್ ಮತ್ತು ವಾಹನಗಳ ಮಾಲಿಕರ ವಿರುದ್ದ ಪ್ರಕರಣ ದಾಖಲಾಗಿರುತ್ತದೆ. ಸದರಿ ಕಾರ್ಯಚರಣೆಯ ವೇಳೆ ವಶಪಡಿಸಿಕೊಂಡ ಯಂತ್ರೋಪಕರಣಗಳು, ಮರಳು ತುಂಬಿದ ವಾಹನಗಳು ಹಾಗೂ ಮರಳಿನ ಒಟ್ಟು ಅಂದಾಜು ಮೌಲ್ಯ ರೂಪಾಯಿ 1 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.