LATEST NEWS
ಉಡುಪಿಯಲ್ಲಿ ಇಂದಿನಿಂದ ಖಾಸಗಿ ವೈದ್ಯರ ಅನಿರ್ಧಿಷ್ಟಾವಧಿ ಮುಷ್ಕರ
ಉಡುಪಿಯಲ್ಲಿ ಇಂದಿನಿಂದ ಖಾಸಗಿ ವೈದ್ಯರ ಅನಿರ್ಧಿಷ್ಟಾವಧಿ ಮುಷ್ಕರ
ಉಡುಪಿ ನವೆಂಬರ್ 16: ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ (ಕೆಪಿಎಂಇ) ವಿರೋಧಿಸಿ ರಾಜ್ಯಾದ್ಯಂತ ಖಾಸಗಿ ವೈದ್ಯರು ನಡೆಸುತ್ತಿರುವ ಮುಷ್ಕರ ತೀವ್ರಗೊಂಡಿದೆ. ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಶಾಖೆ, ಇತರೆ ವೈದ್ಯಕೀಯ ಸಂಘಗಳ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಖಾಸಗಿ ಆಸ್ಪತ್ರೆಗಳು ಇಂದಿನಂದಲೇ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಿವೆ.
ಖಾಸಗಿ ವೈದ್ಯರ ಮುಷ್ಕರ ಹಿನ್ನಲೆ ಉಡುಪಿಯಲ್ಲಿ 700 ಆಸ್ಪತ್ರೆ ಮತ್ತು ಕ್ಲಿನಿಕ್ ಗಳು ಬಂದ್ ಆಗಿವೆ. ಜಿಲ್ಲೆಯಲ್ಲಿನ 35ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಯಿಂದ ಮುಷ್ಕರಕ್ಕೆ ಬೆಂಬಲ ನೀಡಿವೆ. ಅಲ್ಲದೆ 700 ಕ್ಕೂ ಅಧಿಕ ಅಲೋಪತಿ, ಆಯುರ್ವೇದ, ಹೋಮಿಯೋಪತಿ ವೈದ್ಯರು ಕೂಡ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ಸೇವೆ ಸ್ಥಗಿತಗೊಳಿಸಿದ್ದಾರೆ.
ಉಡುಪಿಯ ಪ್ರಖ್ಯಾತ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತುರ್ತುಚಿಕಿತ್ಸೆಗೆ ಮಾತ್ರ ಅವಕಾಶ ನೀಡಲಾಗಿದ್ದು, ಹೊರರೋಗಿಗಳ ವಿಭಾಗವನ್ನು ಬಂದ್ ಮಾಡಲಾಗಿದೆ.
ಸರಕಾರಿ ಆಸ್ಪತ್ರೆಯಲ್ಲಿ ಎಂದಿನಂತೆ ಕರ್ತವ್ಯ
ಜಿಲ್ಲೆಯ 71 ಸರ್ಕಾರಿ ಆಸ್ಪತ್ರೆಯಲ್ಲಿ ಎಂದಿನಂತೆ ಚಿಕಿತ್ಸೆ ಲಭ್ಯವಿದ್ದು, ಅಲ್ಲದೆ 61 ಪ್ರಾಥಮಿಕ ಆರೋಗ್ಯ ಕೇಂದ್ರ, 7 ಸಮುದಾಯ ಆರೋಗ್ಯ ಕೇಂದ್ರ, 2 ತಾಲೂಕು ಆಸ್ಪತ್ರೆ, 1 ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಖಾಸಗಿ ವೈದ್ಯರ ಮುಷ್ಕರ ಹಿನ್ನಲೆಯಲ್ಲಿ ಸರಕಾರಿ ಆಸ್ಪತ್ರೆ ಎದುರು ಸರತಿಯಲ್ಲಿ ಜನ ನಿಂತಿರುವುದು ಸಾಮಾನ್ಯ ಕಂಡು ಬರುತ್ತಿತ್ತು.