LATEST NEWS
ರಾಜಕೀಯ ಸಮಾವೇಶವಾದ ಕನ್ನಡ ಸಾಹಿತ್ಯ ಸಮ್ಮೇಳನ – ಶೋಭಾ ಕರಂದ್ಲಾಜೆ
ರಾಜಕೀಯ ಸಮಾವೇಶವಾದ ಕನ್ನಡ ಸಾಹಿತ್ಯ ಸಮ್ಮೇಳನ – ಶೋಭಾ ಕರಂದ್ಲಾಜೆ
ಉಡುಪಿ ನವೆಂಬರ್ 25: ಮೈಸೂರಿನಲ್ಲಿ ನಡೆಯುತ್ತಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾಂಗ್ರೆಸ್ ಸಮ್ಮೇಳನವಾಗಿ ಪರಿವರ್ತನೆಗೊಂಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಹೊರತಾದ ಚರ್ಚೆ ನಡೆಯುತ್ತಿದೆ ಎಂದರು. ಸಮ್ಮೇಳನಾಧ್ಯಕ್ಷ ಚಂಪಾ ಸೇರಿದಂತೆ ಎಲ್ಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಂಸದೆ ಶೋಭಾ ಕರಂದ್ಲಾಜೆ. ಸಮ್ಮೇಳನಾಧ್ಯಕ್ಷರು ಸಮ್ಮೇಳನದಲ್ಲಿ ಎಡಪಂಥೀಯ ವಿಚಾರಧಾರೆ ಹರಿಯಬಿಟ್ಟಿದ್ದಾರೆ ಎಂದರು.
ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ ಬಿಟ್ಟು ರಾಜಕೀಯ ಸಮ್ಮೇಳನವಾಗಿ ನಡೆಯುತ್ತಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ಮಾತನಾಡಲು ಸಾಹಿತ್ಯ ಸಮ್ಮೇಳನದ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಇದು ಕನ್ನಡ ಸಾರಸ್ವತ ಲೋಕಕ್ಕೆ ಮಾಡಿದ ಅಪಮಾನ ಎಂದು ಹೇಳಿದರು.
ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ನಾಡಿನ ಸಮಸ್ಯೆ ಬಗ್ಗೆ ಎಲ್ಲಿಯೂ ಚರ್ಚೆ ನಡೆದಿಲ್ಲ, ಇದೇ ರೀತಿ ನಡೆದರೆ ಇದು ಆತಂಕ ಪಡುವ ವಿಚಾರವಾಗಿದೆ ಎಂದರು.