LATEST NEWS
ಟಿಪ್ಪು ಜಯಂತಿ ಉಡುಪಿಯಲ್ಲಿ ನಿಷೇಧಾಜ್ಞೆ
ಟಿಪ್ಪು ಜಯಂತಿ ಉಡುಪಿಯಲ್ಲಿ ನಿಷೇಧಾಜ್ಞೆ
ಉಡುಪಿ, ನವೆಂಬರ್ 7 : ನವೆಂಬರ್ 10 ರಂದು ನಡೆಯುವ ಟಿಪ್ಪು ಜಯಂತಿ ಕಾರ್ಯಕ್ರಮದಂದು, ಟಿಪ್ಪು ಜಯಂತಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಗಳಿರುವುದರಿಂದ, ಉಡುಪಿ ಜಿಲ್ಲೆಯಲ್ಲಿ ಕೆಲವು ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಿದ್ದು, ಇದರಿಂದ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಗಳಿರುವುದರಿಂದ, ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮವಾಗಿ, ಸರಕಾರಿ ಕಾರ್ಯಕ್ರಮಗಳು ನಡೆಯುವ ಸ್ಥಳಗಳನ್ನು ಹೊರತುಪಡಿಸಿ, ಜಿಲ್ಲೆಯಾದ್ಯಂತ ನವೆಂಬರ್ 8 ರಂದು ಬೆಳಗ್ಗೆ 6 ಗಂಟೆಯಿಂದ ನವೆಂಬರ್ 11 ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಹೊರಡಿಸಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್ ಆದೇಶಿಸಿದ್ದಾರೆ.