LATEST NEWS
ಧರ್ಮಸಂಸದ್ ನ ಭಾಗವಾಗಿದ್ದಕ್ಕೆ ನುಡಿಸಿರಿ ಪ್ರಶಸ್ತಿ ನಿರಾಕರಿಸಿದ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ
ಧರ್ಮಸಂಸದ್ ನ ಭಾಗವಾಗಿದ್ದಕ್ಕೆ ನುಡಿಸಿರಿ ಪ್ರಶಸ್ತಿ ನಿರಾಕರಿಸಿದ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ
ಬೆಂಗಳೂರು ನವೆಂಬರ್ 29: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನುಡಿಸಿರಿ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.
ಡಿಸೆಂಬರ್ 1 ರಿಂದ 3 ದಿನಗಳ ಕಾಲ ನಡೆಯುವ ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ನುಡಿಸಿರಿ ಅಂಗವಾಗಿ ನುಡಿಸಿರಿ ಪ್ರಶಸ್ತಿಗೆ ಹಿರಿಯ ಸ್ವಾಂತತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿತ್ತು, ಆದರೆ ಪ್ರಶಸ್ತಿ ಸ್ವೀಕರಿಸಲು ದೊರೆಸ್ವಾಮಿ ನಿರಾಕರಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ದೊರೆಸ್ವಾಮಿ ಅವರು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿರುವ ಮೋಹನ್ ಆಳ್ವ ಅವರು ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಬಗ್ಗೆ ಅಪಾರ ಗೌರವವಿದೆ ಆದರೆ, ಕೆಲವು ಸೈದ್ದಾಂತಿಕ ಭಿನ್ನಾಭಿಪ್ರಾಯದ ಕಾರಣದಿಂದ ನುಡಿಸಿರಿ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಹಾಗೂ ಪ್ರಶಸ್ತಿ ಸ್ವೀಕರಿಸದಿರಲು ನಿರ್ಧರಿಸಿದ್ದೆನೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಧರ್ಮಸಂಸದ್ ನಲ್ಲಿ ಮೋಹನ್ ಆಳ್ವ ಪೊಷಕ ಸಮಿತಿಯಲ್ಲಿ ಗುರುತಿಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಆಳ್ವಾಸ್ ನುಡಿಸಿರಿ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದು ದೊರೆಸ್ವಾಮಿ ತಿಳಿಸಿದ್ದಾರೆ.