BANTWAL
ಪೂಜಾರಿ ಆಪ್ತ ಹರಿಕೃಷ್ಣ ಬಂಟ್ವಾಳ್ ಬಿಜೆಪಿಗೆ ?
ಮಂಗಳೂರು, ಜುಲೈ 16 : ಕಾಂಗ್ರೆಸ್ ಹಿರಿ ನಾಯಕ ಬಿ. ಜನಾರ್ದನ ಪೂಜಾರಿ ಅವರ ಪರಮ ಆಪ್ತ, ಮಾಜಿ ಕೆಪಿಸಿಸಿ ವಕ್ತಾರ ಹರಿಕೃಷ್ಣ ಬಂಟ್ವಾಳ್ ಅವರು ಭಾರತೀಯ ಜನತಾ ಪಾರ್ಟಿಗೆ ಸೇರುವುದು ಬಹುತೇಕ ಖಚಿತವಾಗಿದೆ. ಹರಿಕೃಷ್ಣ ಬಂಟ್ವಾಳ್ ಅವರೊಂದಿಗೆ ಅನೇಕ ಅತ್ರಪ್ತ ಕಾಂಗ್ರೆಸ್ ನಾಯಕರುಗಳು ಬಿಜೆಪಿ ಸೇರಲಿದ್ದಾರೆ. ಈಗಾಗಲೇ ರಾಜ್ಯ ಬಿಜೆಪಿ ನಾಯಕರ ಜೊತೆ ಅನೇಕ ಸುತ್ತಿನ ಮಾತುಕತೆಗಳನ್ನು ನಡೆಸಲಾಗಿದ್ದು , ಕಳೆದ 2 ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡ್ಯೂರಪ್ಪ ಮಂಗಳೂರಿಗೆ ಬಂದ ಸಂದರ್ಭದಲ್ಲಿ ಅವರು ಭೇಟಿ ಮಾಡಿ ಪಕ್ಷ ಸೇರುವ ಬಗ್ಗೆ ಸುಧೀರ್ಘ ಮಾತುಕತೆ ನಡೆದಿದೆ ಎನ್ನಲಾಗಿದೆ. ರಾಷ್ಟ್ರೀಯ ನಾಯಕರುಗಳ ಸಮ್ಮುಖದಲ್ಲಿ ಬೃಹತ್ ಸಮಾವೇಶದಲ್ಲಿ ತನ್ನ ಬೆಂಬಲಿಗರೊಂದಿಗೆ ಬಿಜೆಪಿ ಸೇರವ ಬಗ್ಗೆ ಚಿಂತನೆ ನಡೆಸಲಾಗಿದ್ದು, ಶೀಘ್ರವೇ ದಿನ ನಿಗದಿಯಾಗಲಿದೆ.
ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಟೀಕೆಟ್ ವಂಚಿತರಾಗಿದ್ದ ಬಂಟ್ವಾಳ್ ಅವರು ನಂತರ ಬಂಡಾಯ ಅಭ್ಯರ್ಥಿಯಾಗಿ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾ ಮಾಡಲಾಗಿತ್ತು. ಇದೀಗ ಕಾಂಗ್ರೆಸ್ ಮೇಲಿನ ಸೇಡು ತೀರಿಸಿಕೊಳ್ಳಲು ಅವರು ಬಿಜೆಪಿ ಸೇರಲಿದ್ದು ಮುಂಬರುವ 2018 ರ ವಿಧಾನ ಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಿಂದ ಸಚಿವ ಬಿ. ರಮನಾಥ ರೈ ಅವರ ವಿರುದ್ದ ಕಣಕ್ಕೆ ಇಳಿಯಲಿದ್ದಾರೆ.