LATEST NEWS
ಬಿಜೆಪಿ ಸಭೆಯಲ್ಲಿ ಉಸುರಿದ ಉಸ್ತಾದರಿಗೆ ದೂರವಾಣಿ ಮೂಲಕ ಜೀವಬೆದರಿಕೆ
ಮಂಗಳೂರು, ಆಗಸ್ಟ್, 11: ಉಳ್ಳಾಲ ಬಿಜೆಪಿ ಏರ್ಪಡಿಸಿದ್ದ ಮುಸ್ಲಿಂ ಧಾರ್ಮಿಕ ಮುಖಂಡರುಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉಸ್ತಾದರೋರ್ವರಿಗೆ ಇಬ್ಬರು ದೂರವಾಣಿ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಜೀವಬೆದರಿಕೆಯೊಡ್ಡಿರುವ ಘಟನೆ ವರದಿಯಾಗಿದೆ.
ಕೊಣಾಜೆ ಪೋಲಿಸ್ಠಾ ಠಾಣಾ ವ್ಯಾಪ್ತಿಯ ಬೋಳಿಯಾರು ಅಮರ್ ದೀಪ ಸಭಾಂಗಣದಲ್ಲಿ ಗುರುವಾರ ನಡೆದ ಬಿಜೆಪಿ ಧಾರ್ಮಿಕ ಮುಖಂಡರುಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಹಿನ್ನೆಲೆಯಲ್ಲಿ ಬೆದರಿಕೆ ಕರೆಗಳು ಬಂದಿವೆ. ಬೆಳ್ಮ ಕಲ್ಪಾದೆ ಮತ್ತು ತಲಪಾಡಿ ಮದರಸ ಶಿಕ್ಷಕನಾಗಿರುವ ಎ.ಬಿ ಹನೀಫ್ ನಿಝಾಮಿ ಎಂಬವರಿಗೆ ಜೀವಬೆದರಿಕೆ ಒಡ್ಡಿರುವ ಎರಡು ದೂರವಾಣಿ ಕರೆಗಳು + 9325921 ಮತ್ತು 9089446595 ಎಂಬ ದೂರವಾಣಿ ಮೂಲಕ ಬೆದರಿಕೆ ಕರೆಗಳು ಬಂದಿವೆ. ಈ ಕುರಿತು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಕ್ಷೇತ್ರ ಅಧ್ಯಕ್ಷ ಅಶ್ರಫ್ ಹರೇಕಳ, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಆಸ್ಗರ್ ಪಂಚಾಯತ್ ಸದಸ್ಯ ರಿಯಾಝ್ ಬೋಳಿಯಾರ್ ಅವರ ನಿಯೋಗ ಕೊಣಾಜೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದು, ಅದರಂತೆ ಪ್ರಕರಣ ದಾಖಲಾಗಿದೆ.