Connect with us

UDUPI

ಬೆಳೆ ಸಮೀಕ್ಷೆಯಿಂದ ಇತರೆ ಯೋಜನೆಗಳಿಗೂ ಅನುಕೂಲ- ಜಿಲ್ಲಾಧಿಕಾರಿ

ಬೆಳೆ ಸಮೀಕ್ಷೆಯಿಂದ ಇತರೆ ಯೋಜನೆಗಳಿಗೂ ಅನುಕೂಲ- ಜಿಲ್ಲಾಧಿಕಾರಿ

ಉಡುಪಿ, ನವೆಂಬರ್ 9 : ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯನ್ನು ಆಪ್ ಮೂಲಕ ದಾಖಲಿಸುವುದರಿಂದ ಬೆಳ ವಿಮೆ ಮಾತ್ರವಲ್ಲದೇ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳಿಂದ ದೊರೆಯುವ ವಿವಿಧ ಯೋಜನೆಗಳ ಪ್ರಯೋಜನವನ್ನು ಶೀಘ್ರವಾಗಿ ಪಡೆಯಲು , ಬೆಳ ಸಮೀಕ್ಷೆಯಿಂದ ಸಂಗ್ರಹಿಸುವ ಮಾಹಿತಿ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್ ತಿಳಿಸಿದ್ದಾರೆ.

ಅವರು ಗುರುವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯ ವಿವಿಧ ರೈತ ಸಂಘಟನೆಗಳ ಮುಖಂಡರು, ಪ್ರಗತಿಪರ ರೈತರು, ವಿವಿಧ ಕಾಲೇಜುಗಳ ಉಪನ್ಯಾಸಕರಿಗೆ , ಬೆಳೆ ಸಮೀಕ್ಷೆ ದಾಖಲಿಸುವ ಕುರಿತಂತೆ ನೂತನವಾಗಿ ಬಿಡುಗಡೆ ಮಾಡಿರುವ ಮೊಬೈಲ್ ಆಪ್ ಉಪಯೋಗಿಸುವ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ 267 ಗ್ರಾಮಗಳಲ್ಲಿ, 9.91 ಲಕ್ಷ ಆರ್.ಟಿ.ಸಿ ಗಳಿದ್ದು, ಜಿಲ್ಲೆಯಲ್ಲಿರುವ ಗ್ರಾಮ ಲೆಕ್ಕಿಗರಿಗೆ ಪ್ರತಿಯೊಬ್ಬರಿಗೆ 3700 ಆರ್.ಟಿ.ಸಿ ಗಳನ್ನು ಸಮೀಕ್ಷೆಗೆ ಒಳಪಡಿಸುವ ಕಾರ್ಯ ನೀಡಲಾಗಿದ್ದು, ವಿವಿಧ ಕಾರಣಗಳಿಂದ ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ವಿಳಂಬವಾಗಿದ್ದು, ಪ್ರಸ್ತುತ ರಾಜ್ಯ ಸರ್ಕಾರ , ಬೆಳ ಸಮೀಕ್ಷೆ ದಾಖಲಿಸಲು , ರೈತರು ಮತ್ತು ಸಾರ್ವಜನಿಕರು ಸುಲಭದಲ್ಲಿ ಬಳಸಬಹುದಾದ ಆಪ್ ಅಭಿವೃಧ್ದಿಪಡಿಸಿದ್ದು, ಇದನ್ನು ಬಳಸಿಕೊಂಡು ರೈತರೇ ತಮ್ಮ ಜಮೀನಿನ ಸಮೀಕ್ಷೆ ಕಾರ್ಯ ಕೈಗೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರಿಗೆ ನೀಡುವ ಉದ್ದಶದಿಂದ,ಜಿಲ್ಲೆಯ ವಿವಿಧ ಕಾಲೇಜುಗಳ ಆಸಕ್ತ ವಿದ್ಯಾರ್ಥಿಗಳಿಗೆ, ಈ ಆಪ್ ಬಳಸುವ ಕುರಿತು ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತ ಕಾಲೇಜುಗಳು ತಮ್ಮ ವಿದ್ಯಾರ್ಥಿಗಳ ಪಟ್ಟಿಯನ್ನು ನೀಡಿದಲ್ಲಿ, ಅವರಿಗೆ ಸಮೀಕ್ಷೆ ಮಾಡುವ ಕುರಿತು ತರಬೇತಿ ನೀಡಲಾಗುವುದು, ಕಾಲೇಜು ವಿದ್ಯಾರ್ಥಿಗಳು ಈ ಆಪ್‍ನ್ನು ಅತ್ಯಂತ ಸುಲಭವಾಗಿ ಬಳಸಬಹುದಾಗಿದ್ದು, ಈ ಸಮೀಕ್ಷೆ ನಡೆಸುವ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ವತಿಯಿಂದ ಪ್ರಶಂಸನಾ ಪತ್ರ ವಿತರಿಸಲಾಗುವುದು, ಈ ಪ್ರಮಾಣ ಪತ್ರಗಳು , ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ವಿದ್ಯಾರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಸಮಯದಲ್ಲಿ , ಪ್ರಾಯೋಗಿಕ ಅನುಭವ ಹೊಂದಿರುವ ಪ್ರಮಾಣಪತ್ರಕ್ಕೆ ಸಮನಾಗಿರುತ್ತದೆ , ವಿಧ್ಯಾರ್ಥಿಗಳು ತಮ್ಮ ಬಿಡುವಿನ ಅವಧಿಯಲ್ಲಿ ಸಮೀಕ್ಷೆ ನಡೆಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುವ ಸಮಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸದ ಕಾರಣ ಜಿಲ್ಲೆಯ ರೈತರು ಬೆಳೆ ವಿಮೆ ಮಾಡಿಸಲು ಕಡಿಮೆ ಆಸಕ್ತಿ ತೋರುತಿದ್ದಾರೆ, ಆದರೆ ಪ್ರಾಕೃತಿಕ ವಿಕೋಪಗಳು ಯಾವುದೇ ಮುನ್ಸೂಚನೆ ನೀಡದೇ ಸಂಭವಿಸುವುದರಿಂದ , ಆ ಸಂದರ್ಭದಲ್ಲಿ ಜಿಲ್ಲೆಯ ರೈತರು ನಷ್ಠಕ್ಕೆ ಒಳಗಾಗುವುದನ್ನು ತಪ್ಪಿಸಲು ಹಾಗೂ ಸಕಾಲಿಕ ಮತ್ತು ನ್ಯಾಯಯುತ ಪರಿಹಾರ ಪಾವತಿ ಮಾಡುವ ಉದ್ದೇಶದಿಂದ ಕೈಗೊಂಡಿರುವ ಈ ಸಮೀಕ್ಷಾ ಕಾರ್ಯದಲ್ಲಿ ಜಿಲ್ಲೆಯ ಎಲ್ಲಾ ರೈತರು ಭಾಗವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದು, ಸಮೀಕ್ಷಾ ಆಪ್ ಬಳಸುವ ಕುರಿತು ವೀಡಿಯೋ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಯ ವೆಬ್ ಸೈಟ್ ನಲ್ಲಿ ಅಳವಡಿಸಲಾಗಿದ್ದು, ಹಾಗೂ ಸಮೀಕ್ಷಾ ವಿವರ ದಾಖಲಿಸುವ ಕುರಿತ ಮಡಿಕೆಪತ್ರವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *