LATEST NEWS
ಮಂಗಳೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
ಮಂಗಳೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
ಮಂಗಳೂರು ಡಿಸೆಂಬರ್ 19: ಮಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ .ಲಕ್ಷದ್ವೀಪಕ್ಕೆ ಭೆೇಟಿ ನೀಡುವ ಹಿನ್ನಲೆಯಲ್ಲಿ ಮಂಗಳೂರಿಗೆ ರಾತ್ರಿ ಸುಮಾರು 11.30 ಸುಮಾರಿಗೆ ಆಗಮಿಸಿದರು.
ರಾತ್ರಿ ಸುಮಾರು 11.30 ಗಂಟೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಅದ್ಧೂರಿ ಸ್ವಾಗತ ನೀಡಲಾಯಿತು. ವಿಮಾನ ನಿಲ್ದಾಣ ದಿಂದ ಮೋದಿ ಹೊರಬರುತ್ತಿದ್ದಂತೆ ಮೋದಿ ಮೋದಿ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಈ ನಡುವೆ ಗುಜರಾತ್ ಹಾಗು ಹಿಮಾಚಲ ಪ್ರದೇಶದ ಚುನಾವಣೆಯ ಗೆಲುವಿನ ವಿಜಯೋತ್ಸವ ಆಚರಣೆಯಲ್ಲಿ ಮೋದಿ ಪಾಲ್ಗೋಂಡರು.
ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರನ್ನು ವಿಮಾನ ನಿಲ್ದಾಣ ಆವರಣದಲ್ಲಿ ಸೇರಿದ್ದರು. ಲಕ್ಷದ್ವೀಪಕ್ಕೆ ತೆರಳುವ ದಾರಿ ಮದ್ಯೆ ಪ್ರಧಾನಿ ಮಂಗಳೂರಿಗೆ ಆಗಮಿಸಿ ತಂಗಿದ್ದು ಬಿಜೆಪಿ ಕಾರ್ಯಕರ್ತರಿಗೆ ಮುಂದಿನ ಟಾರ್ಗೆಟ್ ಕರ್ನಾಟಕ ಚುನಾವಣೆ ಎನ್ನುವ ಸುಳಿವನ್ನು ನೀಡಿದ್ದಾರೆ. ಅತ್ತ ಎರಡು ರಾಜ್ಯಗಳ ಚುನಾವಣೆ ಫಲಿತಾಂಶದಂದೇ ಮೋದಿ ಕರ್ನಾಟಕದ ಮಂಗಳೂರಿಗೆ ಕಾಲಿಡುತ್ತಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಲಾಗುತ್ತಿದೆ.