LATEST NEWS
ಯುಪಿಸಿಎಲ್ ವಿದ್ಯುತ್ ಉತ್ಪಾದನೆ ಸ್ಥಗಿತ – ಉಡುಪಿಯಲ್ಲಿ ಪವರ್ ಕಟ್ ಆರಂಭ
ಯುಪಿಸಿಎಲ್ ವಿದ್ಯುತ್ ಉತ್ಪಾದನೆ ಸ್ಥಗಿತ – ಉಡುಪಿಯಲ್ಲಿ ಪವರ್ ಕಟ್ ಆರಂಭ
ಉಡುಪಿ ನವೆಂಬರ್ 9: ಯುಪಿಸಿಎಲ್ ಉಷ್ಣವಿದ್ಯುತ್ ಸ್ಥಾವರದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. 600 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನೆ ಮಾಡುವ ಒಂದು ಘಟಕ ಸ್ಥಗಿತಗೊಂಡಿದೆ. ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಪವರ್ ಕಟ್ ಆರಂಭವಾಗಿದೆ.
ಯುಪಿಸಿಎಲ್ ಉಷ್ಣ ವಿದ್ಯುತ್ ಸ್ಥಾವರದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ 600 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಯೂನಿಟ್ ಸ್ಥಗಿತಗೊಂಡಿದೆ. ಚಳಿಗಾಲದಲ್ಲೆ ಉಡುಪಿ ನಗರ ಕತ್ತಲಲ್ಲಿ ಉಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಯುಪಿಸಿಎಲ್ ಆಡಳಿತ ಮಂಡಳಿಯ ಮಾಹಿತಿ ಪ್ರಕಾರ 15 ದಿನಗಳಲ್ಲಿ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ಇನ್ನು 15 ದಿನ ಉಡುಪಿಯಲ್ಲಿ ಕರೆಂಟ್ ಕಣ್ಣಮುಚ್ಚಾಲೆ ಆಡಲಿದೆ. ಈ ನಡುವೆ ಉಡುಪಿ ನಗರಕ್ಕೂ ಪವರ್ ಕಟ್ ಬಿಸಿ ತಟ್ಟಿದೆ. ತಾಂತ್ರಿಕ ಸಮಸ್ಯೆ ಬಗೆಹರಿದ ನಂತರ ಜಿಲ್ಲೆಗೆ 24 ಗಂಟೆ ವಿದ್ಯುತ್ ನೀಡಲಾಗುವುದೆಂದು ಸಚಿವ ಪ್ರಮೋದ್ ಮಧ್ವರಾಜ್ ಭರವಸೆ ನೀಡಿದ್ದಾರೆ.