DAKSHINA KANNADA
ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ
ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ
ಪುತ್ತೂರು,ಅಕ್ಟೋಬರ್ 11: ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ರಾಜ್ಯದಾದ್ಯಂತ ಇಂದು ಪ್ರತಿಭಟನೆ ಹಮ್ಮಿಕೊಂಡಿದೆ.ಪುತ್ತೂರಿನಲ್ಲೂ ಈ ಸಂಘಟನೆಗಳ ನೇತೃತ್ವದಲ್ಲಿ 13 ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಪುತ್ತೂರು,ಅಕ್ಟೋಬರ್ 11: ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ರಾಜ್ಯದಾದ್ಯಂತ ಇಂದು ಪ್ರತಿಭಟನೆ ಹಮ್ಮಿಕೊಂಡಿದೆ.ಪುತ್ತೂರಿನಲ್ಲೂ ಈ ಸಂಘಟನೆಗಳ ನೇತೃತ್ವದಲ್ಲಿ 13 ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಜಿಲ್ಲಾ ಗೋರಕ್ಷಕ್ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ಧರಾಮಯ್ಯ ಸರಕಾರ ಹಿಂದೂ ಮುಖಂಡರನ್ನು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಧಮನಿಸುವ ಕಾರ್ಯವನ್ನು ನಡೆಸುತ್ತಿದೆ.ಹಿಂದೂ ಮುಖಂಡರ ಮೇಲೆ ಗೂಂಡಾ ಕಾಯ್ದೆ, ಗಡಿಪಾರಿನಂತಹ ಕಾಯ್ದೆಯನ್ನು ಹಾಕುವ ಮೂಲಕ ಸಂಘಟನೆಯನ್ನು ಪೋಲೀಸ್ ಇಲಾಖೆಯನ್ನು ಬಳಸಿ ನಿಯಂತ್ರಿಸಲು ಯತ್ನಿಸುವ ಪ್ರಯತ್ನ ನಡೆಯುವುದಿಲ್ಲ ಎಂದರು. ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು ನೂರು ಕಡೆಗಳಲ್ಲಿ ಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.