LATEST NEWS
ವೈದ್ಯರ ಮುಷ್ಕರಕ್ಕೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ
ವೈದ್ಯರ ಮುಷ್ಕರಕ್ಕೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ
ಪುತ್ತೂರು ನವೆಂಬರ್ 17: ರಾಜ್ಯ ಸರಕಾರ ಹಾಗೂ ವೈದ್ಯರ ನಡುವೆ ನಡೆಯುತ್ತಿರುವ ಗುದ್ದಾಟ ಹಾಗೂ ವೈದ್ಯರ ಮುಷ್ಕರಕ್ಕೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ವೈದ್ಯರ ಮುಷ್ಕರದ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಸೂಕ್ತ ಚಿಕಿತ್ಸೆ ಲಭಿಸದೇ ಸಾವಿಗೀಡಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ಪೂಜಾ ಮೃತ ವಿಧ್ಯಾರ್ಥಿನಿ . ಪೂಜಾ ಕಿಡ್ನಿಗೆ ವೈಫಲ್ಯದಿಂದ ಬಳಲುತ್ತಿದ್ದು ಅವರಿಗೆ ವಾರಕ್ಕೆರಡು ಬಾರಿ ಡಯಾಲಿಸಿಸ್ ಮಾಡಲಾಗುತ್ತಿತ್ತು. ವೈದ್ಯರ ಮುಷ್ಕರದ ಹಿನ್ನಲೆಯಲ್ಲಿ ವಿಧ್ಯಾರ್ಥಿನಿ ಪೂಜಾ ಅವರ ಡಯಾಲಿಸಿಸ್ ಮಾಡಲು ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲ ಅನಾರೋಗ್ಯ ತೀವ್ರಗೊಂಡು ಪುತ್ತೂರು ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಸಿಟಿ ಆಸ್ಪತ್ರೆಯಲ್ಲಿ ರಕ್ತದಲ್ಲಿ ಸಮಸ್ಯೆ ಇದೆ ವೈದ್ಯರ ಸಲಹೆ ಬಳಿಕವೇ ಡಯಾಸಿಸ್ ಮಾಡುವಂತೆ ಸಲಹೆ ನೀಡಲಾಗಿತ್ತು. ನಂತರ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ತೆರಳಿದಾಗ ಆಸ್ಪತ್ರೆಯಲ್ಲಿ ವೈದ್ಯರ ಮುಷ್ಕರದ ಹಿನ್ನಲೆಯಲ್ಲಿ ವೈದ್ಯರ ಸಿಗದೆ ಚಿಕಿತ್ಸೆ ನೀಡಲಾಗಲಿಲ್ಲ. ನಂತರ ಅವರನ್ನು ಪುತ್ತೂರಿನ ಆಸ್ರತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧ್ಯಾರ್ಥಿನಿ ಪೂಜಾ ಸರಕಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ವೈದ್ಯರ ಮುಷ್ಕರ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಲಭ್ಯವಾಗಿದ್ದಲ್ಲಿ ವಿಧ್ಯಾರ್ಥಿನಿ ಪೂಜಾ ಬದುಕುಳಿಯುತ್ತಿದ್ದರು. ಆದರೆ ವೈದ್ಯರ ಮುಷ್ಕರ ವಿಧ್ಯಾರ್ಥಿನಿಯ ಬಲಿ ಪಡೆದಿದ್ದು. ಸಾರ್ವಜನಿಕರು ವೈದ್ಯರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.