DAKSHINA KANNADA
ಶಾಸಕನಾದರೆ ಗೋ ರಕ್ಷಣೆಗೆ ಪ್ರಮುಖ ಆದ್ಯತೆ- ಪುತ್ತೂರು ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು
ಶಾಸಕನಾದರೆ ಗೋ ರಕ್ಷಣೆಗೆ ಪ್ರಮುಖ ಆದ್ಯತೆ- ಪುತ್ತೂರು ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು
ಪುತ್ತೂರು, ಎಪ್ರಿಲ್ 21: ಪುತ್ತೂರು ಕ್ಷೇತ್ರದಿಂದ ಎರಡನೇ ಬಾರಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಂಜೀವ ಮಠಂದೂರು ಎಪ್ರಿಲ್ 23 ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಶಾಸಕನಾಗಿ ಆಯ್ಕೆಯಾದಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಗೋಕಳ್ಳತನಕ್ಕೆ ಕಡಿವಾಣ ಹಾಕಿ ಗೋರಕ್ಷಣೆಗೆ ಮೊದಲ ಆದ್ಯತೆ ನೀಡುವುದಾಗಿ ಅವರು ಘೋಷಿಸಿಕೊಂಡಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಅವರು ಜಿಲ್ಲೆಯ ಸಾಮರಸ್ಯಕ್ಕೆ ಧಕ್ಕೆ ತರುವ ಗೋಕಳ್ಳತನಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.
ಈ ನಿಟ್ಟಿನಲ್ಲಿ ಇದನ್ನು ತಡೆಗಟ್ಟುವ ಪ್ರಯತ್ನವನ್ನು ಶಾಸಕನಾದರೆ ಮಾಡುವುದಾಗಿ ಅವರು ಹೇಳಿದರು. ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡದೆ ಎಲ್ಲಾ ಸಮುದಾಯಗಳಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಮಾಡುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಎಪ್ರಿಲ್ 23 ರಂದು ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಕಾರ್ಯಕರ್ತರು ದೇವಸ್ಥಾನದ ಮೂಲಕ ತೆಂಕಿಲದ ಸ್ವಾಮಿ ಕಲಾ ಮಂದಿರದಲ್ಲಿ ಸೇರಲಿದ್ದಾರೆ.
ಬಳಿಕ ಕಾರ್ಯಕರ್ತರ ಸಭೆ ನಡೆಯಲಿದ್ದು, ಬಿಜೆಪಿ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.