BANTWAL
ಸಾಮರಸ್ಯ ನಡಿಗೆ ಸೌಹಾದತೆಯೆಡೆಗೆ ಕಾಲ್ನಡಿಗೆ ಜಾಥಾಕ್ಕೆ ಚಾಲನೆ
ಸಾಮರಸ್ಯ ನಡಿಗೆ ಸೌಹಾದತೆಯೆಡೆಗೆ ಕಾಲ್ನಡಿಗೆ ಜಾಥಾಕ್ಕೆ ಚಾಲನೆ
ಬಂಟ್ವಾಳ ಡಿಸೆಂಬರ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ಜಾತ್ಯತೀತ ಪಕ್ಷ, ಸಂಘಟನೆಗಳ ಸಹಭಾಗಿತ್ವದಲ್ಲಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ‘ಸಾಮರಸ್ಯ ನಡಿಗೆ ಸೌಹಾದತೆಯೆಡೆಗೆ’ ಕಾಲ್ನಡಿಗೆ ಜಾಥಾಕ್ಕೆ ಫರಂಗಿಪೇಟೆಯಲ್ಲಿ ಚಾಲನೆ ನೀಡಲಾಯಿತು.
ಚಿತ್ರನಟ ಪ್ರಕಾಶ್ ರೈ, ಮಾಜಿ ಸಚಿವ ಅಮರನಾಥ ಶೆಟ್ಟಿ ಸೇರಿದಂತೆ ವಿವಿಧ ಪಕ್ಷ, ಸಂಘಟನೆಗಳ ಮುಖಂಡರು, ನಾಯಕರ ಸಮ್ಮುಖದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಬಲೂನುಗಳನ್ನು ಹಾರಿಸುವ ಮೂಲಕ ನಡಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಮಾನಾಥ ರೈ ಜಿಲ್ಲೆಯ ಸಾಮರಸ್ಯಕ್ಕೆ ಕೆಲವರು ಧಕ್ಕೆಯುಂಟು ಮಾಡುತ್ತಿದ್ದಾರೆ. ಆದರೆ, ಶಾಂತಿಯನ್ನು ಕಾಪಾಡುವುದು ಜಾಥಾದ ಉದ್ದೇಶ. ಮಾಣಿಯವರೆಗೆ ಮಾತ್ರವಲ್ಲ ಜೀವನ ಪರ್ಯಂತ ಜತೆಯಾಗಿ ನಡೆಯೋಣ. ಜನರಿಗೆ, ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಜಾಥಾ ಸಾಗಲಿ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆಯಲ್ಲಿ ಪ್ರಾರಂಭವಾದ ಕಾಲ್ನಡಿಗೆ ಜಾಥಾ ಸಂಜೆ ಮಾಣಿಯಲ್ಲಿ ಸಮಾಪನಗೊಳ್ಳಲಿದೆ.
VIDEO