LATEST NEWS
ಸೌದಿ ಅರೇಬಿಯಾದಲ್ಲಿ ಸಂಕಷ್ಟದಲ್ಲಿದ್ದ ಮಹಿಳೆ ಮರಳಿ ಮನೆಗೆ
ಸೌದಿ ಅರೇಬಿಯಾದಲ್ಲಿ ಸಂಕಷ್ಟದಲ್ಲಿದ್ದ ಮಹಿಳೆ ಮರಳಿ ಮನೆಗೆ
ಮಂಗಳೂರು, ನವೆಂಬರ್ 26 : ಮನೆ ಕೆಲಸದ ಉದ್ಯೋಗಕ್ಕೆಂದು ಸೌದಿ ಅರೇಬಿಯಕ್ಕೆ ತೆರಳಿ ಸಂಕಷ್ಟಕ್ಕೀಡಾಗಿದ್ದ ಮಂಗಳೂರು ವಾಮಂಜೂರಿನ ಮಹಿಳೆ ವಿಜಯಾ ಎಂಬುವವರು ಇಂದು ಮಂಗಳೂರು ವಿಮಾನ ನಿಲ್ದಾಣದ ಮೂಲಕ ತವರಿಗೆ ತಲುಪಿದ್ದಾರೆ.
ಇವರನ್ನು ಸಂಕಷ್ಟದಿಂದ ಪಾರುಮಾಡಲು ಇಂಡಿಯನ್ ಸೋಶಿಯಲ್ ಫೋರಮ್ ನಡೆಸಿದ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ನಿನ್ನೆ ರಾತ್ರಿ ಸೌದಿ ಪ್ರಾಯೋಜಕ ದಮಾಮ್ ವಿಮಾನ ನಿಲ್ದಾಣದ ಎಮಿಗ್ರೇಶನ್ ವರೆಗೂ ಕರೆದುಕೊಂಡು ಬಂದಿದ್ದರು. ಆದರೆ ಇಂಡಿಯನ್ ಸೋಶಿಯಲ್ ಫೋರಮ್ ಕಾರ್ಯಕರ್ತರ ಭೇಟಿಗೆ ಅವಕಾಶ ನೀಡಿರಲಿಲ್ಲ.
ವಿಜಯಾ ತವರಿಗೆ ಮರಳುತ್ತಿರುವ ವಿಚಾರವನ್ನು ಖಚಿತಪಡಿಸಿಕೊಳ್ಳಲು ದಮಾಮ್ ವಿಮಾನ ನಿಲ್ದಾಣದ ಜೆಟ್ ಏರ್ ವೇಸ್ ಚೆಕ್ ಇನ್ ಕೌಂಟರ್ ನ್ನು ಸಂಪರ್ಕಿಸಿದ್ದರು. ಮಂಗಳೂರಿಗೆ ಬಂದಿಳಿದ ವಿಜಯಾರನ್ನು ಎಸ್ ಡಿಪಿಐ ನಿಯೋಗವು ಸ್ವಾಗತಿಸಿತು. ಬಡ ಕುಟುಂಬದ ಆಸರೆಯಾಗಿದ್ದ ವಿಜಯಾ 2015ರಲ್ಲಿ ಸೌದಿಅರೇಬಿಯದ ದಮಾಮ್ ಗೆ ತೆರಳಿದ್ದರು.
ಮೊದಲ ಮೂರು ತಿಂಗಳ ಕಾಲ ಮಾತ್ರ ಮನೆಯವರೊಂದಿಗೆ ಸಂಪರ್ಕದಲ್ಲಿದ್ದು ಅನಂತರದ ದಿನಗಳಲ್ಲಿ ವಿಜಯಾರವರು ಸರಿಯಾಗಿ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಇದರಂದಾಗಿ ಅನಾರೋಗ್ಯಪೀಡಿತ ಪತಿ ಮತ್ತು ಮಗ ಸಾಕಷ್ಟು ಸಂಕಟ ಮತ್ತು ಆತಂಕಕ್ಕೊಳಗಾಗಿದ್ದರು. ಈ ಬಗ್ಗೆ ಎಸ್ ಡಿಪಿಐ, ಇಂಡಿಯನ್ ಸೋಶಿಯಲ್ ಫೋರಮ್ ನ ಗಮನಕ್ಕೂ ತಂದಿದ್ದರು. ಹೀಗಾಗಿ ಪ್ರಕರಣವು ಭಾರತೀಯ ರಾಯಭಾರ ಕಚೇರಿಯಲ್ಲಿ ದಾಖಲಾಗಿ ಅವರ ಬಿಡುಗಡೆಗಾಗಿ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಇಂಡಿಯನ್ ಸೋಶಿಯಲ್ ಫೋರಮ್ ಕಾರ್ಯಾಚರಿಸಿತ್ತು.